ಬೆಂಗಳೂರು : ಅಣ್ಣನ ಹಠಾಟ್ ನಿಧನದಿಂದ ನೊಂದಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಐದು ದಿನಗಳ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಚಿರಂಜೀವಿ ಸರ್ಜಾ ಬಗ್ಗೆ ಬರೆದುಕೊಂಡಿದ್ದಾರೆ.
ಇನ್ ಸ್ಟಾಗ್ರಾಂನಲ್ಲಿ ತಮ್ಮ ನೋವನ್ನು ಹೇಳಿಕೊಂಡಿರುವ ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಸಾವಿಗೂ ಒಂದು ದಿನ ಮುನ್ನ ಶೇರ್ ಮಾಡಿಕೊಂಡಿದ್ದ ಫೋಟೋವನ್ನು ಹಂಚಿಕೊಂಡು “ನೀನು ನನಗೆ ವಾಪಸ್ ಬೇಕು. ನೀ ಇರದೆ ನನಗೆ ಇರಲು ಸಾಧ್ಯವಾಗುತ್ತಿಲ್ಲ” ಎಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ.
ನಟ ಧ್ರುವ ಸರ್ಜಾ ಅವರ ಸ್ಟೇಟಸ್ ನೋಡಿದ ಅಭಿಮಾನಿಗಳು, ತಮ್ಮ ನೆಚ್ಚಿನ ನಟನಿಗೆ ಕಮೆಂಟ್ ಗಳ ಮೂಲಕ ಸಾಂತ್ವನ ಹೇಳುತ್ತಿದ್ದಾರೆ.
ಇನ್ನು ಕಳೆದ ಭಾನುವಾರ ಹೃದಯಾಘಾತದಿಂದ ಚಿರಂಜೀವಿ ಸರ್ಜಾ ಮೃತಪಟ್ಟಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸೋಮವಾರ ಅಂತ್ಯಕ್ರಿಯೆ ನಡೆದಿದೆ.








