Bengaluru: ಕತ್ತು ಕೊಯ್ದ ಸ್ಥಿತಿಯಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿ ಶವ ಪತ್ತೆ…
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನ ಶವ ಕತ್ತುಕೊಯ್ದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿ ನಿತಿನ್(19) ಬನ್ನೇರುಘಟ್ಟ ಸಮೀಪದ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ಹಾಸ್ಟೆಲ್ ಶೌಚಾಲಯದಲ್ಲಿ ನಡೆದಿದೆ. ನಿತಿನ್ ಇದೇ ತಿಂಗಳು ಡಿ.1ಕ್ಕೆ ಪ್ರಥಮ ವರ್ಷದ ಇಂಜಿನಿಯರಿಂಗ್ ಪದವಿಗೆ ಅಡ್ಮಿಷನ್ ಮಾಡಿಸಿದ್ದ ನಿತಿನ್ ಚಾಕುವಿನಿಂದ ತಾನೇ ಚುಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನಿತಿನ್ ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ನಿತಿನ್ ಎಷ್ಟು ಹೊತ್ತಾದರೂ ಬಾರದಿದ್ದಾಗ ಹಾಸ್ಟೆಲ್ ಸಹಪಾಠಿ ಬಂದು ಬಾಗಿಲು ಬಡಿದಿದ್ದ. ಬಾಗಿಲು ತೆಗೆಯದ ಹಿನ್ನೆಲೆ ಹಾಸ್ಟೆಲ್ ವಾರ್ಡನ್‍ಗೆ ವಿಷಯ ತಿಳಿಸಿದ್ದಾನೆ. ಕೂಡಲೇ ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದಿದ್ದಾರೆ. ಆಗ ಕತ್ತು ಕೊಯ್ದ ಸ್ಥಿತಿಯಲ್ಲಿ ಶೌಚಾಲಯದಲ್ಲಿ ನಿತಿನ್ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru: A private college student’s body was found strangled…








