ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾದ ಜಿಂಬಾಬ್ವೆ ಪ್ರವಾಸವೂ ರದ್ದು..!

admin by admin
June 13, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾದ ಜಿಂಬಾಬ್ವೆ ಪ್ರವಾಸವೂ ರದ್ದು..!

ಟೀಮ್ ಇಂಡಿಯಾ ಆಟಗಾರರು ಸದ್ಯಕ್ಕಂತೂ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡುತ್ತಿಲ್ಲ. ಕೊರೋನಾ ವೈರಸ್‍ನಿಂದಾಗಿ ಮನೆಯಲ್ಲೇ ಕುಳಿತಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ದೈನಂದಿನ ಫಿಟ್‍ನೆಸ್ ಜೊತೆಗೆ ಸಾಮಾಜಿಕ ಜಾಲ ತಾಣದಲ್ಲೇ ಬಿಝಿಯಾಗಿಬಿಟ್ಟಿದ್ದಾರೆ.

Related posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

September 22, 2026
ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

September 22, 2026

ಇನ್ನೊಂದೆಡೆ ಬಿಸಿಸಿಐ ಕ್ರಿಕೆಟ್ ಟೂರ್ನಿಗಳನ್ನು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಮುಖ್ಯವಾಗಿ ಐಪಿಎಲ್ ಟೂರ್ನಿಯನ್ನು ಸಂಘಟಿಸಲು ಎಲ್ಲಾ ರೀತಿಯ ಅವಕಾಶಗಳನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ. ಈ ನಡುವೆ ಟೀಮ್ ಇಂಡಿಯಾದ ದಕ್ಷಿಣ ಆಫ್ರಿಕಾ ಮತ್ತ ಶ್ರೀಲಂಕಾ ಪ್ರವಾಸಗಳನ್ನು ರದ್ದುಗೊಳಿಸಿದೆ. ಇದೀಗ ಆಗಸ್ಟ್ ನಲ್ಲಿ ನಡೆಯಬೇಕಿದ್ದ ಜಿಂಬಾಬ್ವೆ ಪ್ರವಾಸವನ್ನು ಕೂಡ ರದ್ದು ಮಾಡಿದೆ.
ಈ ಹಿಂದೆ ವೇಳಾಪಟ್ಟಿ ನಿಗದಿಯಾಗಿದ್ದಂತೆ ಮಾರ್ಚ್‍ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಟೀಮ್ ಇಂಡಿಯಾ ಆಡಬೇಕಿತ್ತು. ಬಳಿಕ ಐಪಿಎಲ್, ಆನಂತರ ಜೂನ್ ಕೊನೆವಾರ ಮತ್ತು ಜುಲೈನಲ್ಲಿ ಶ್ರೀಲಂಕಾ ಪ್ರವಾಸ ಮಾಡಬೇಕಿತ್ತು. ಬಳಿಕ ಆಗಸ್ಟ್ 22ರಿಂದ ಜಿಂಬಾಬ್ವೆಯಲ್ಲಿ ಮೂರು ಏಕದಿನ ಸರಣಿಯನ್ನು ಆಡಬೇಕಿತ್ತು. ಆದ್ರೆ ಈ ಎಲ್ಲಾ ಸರಣಿಗಳನ್ನು ಬಿಸಿಸಿಐ ಮೊಟಕುಗೊಳಿಸಿದೆ.
ಮುಂಬರುವ ದಿನಗಳಲ್ಲಿ ಅಂದ್ರೆ ಸೆಪ್ಟಂಬರ್‍ನಲ್ಲಿ ಏಷ್ಯಾಕಪ್ ಟಿ-ಟ್ವೆಂಟಿ, ಹಾಗೂ ಅಕ್ಟೋಬರ್ ನವೆಂಬರ್ ನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ನಡೆಯಲಿದೆ. ಆದ್ರೆ ಈ ಎರಡು ಪ್ರತಿಷ್ಠಿತ ಟೂರ್ನಿಗಳ ಭವಿಷ್ಯ ಇನ್ನೂ ನಿರ್ಧಾರವಾಗಿಲ್ಲ. ಈ ನಡುವೆ ಈ ಎರಡು ಪ್ರತಿಷ್ಠಿತ ಟೂರ್ನಿಗಳು ಮುಂದೂಡಲ್ಪಟ್ಟರೇ, ಆ ಸಮಯದಲ್ಲಿ ಐಪಿಎಲ್ ಟೂರ್ನಿಯನ್ನು ಸಂಘಟಿಸಲು ಬಿಸಿಸಿಐ ಪ್ಲಾನ್ ಮಾಡಿಕೊಳ್ಳುತ್ತಿದೆ.
ಕೊರೋನಾ ವೈರಸ್ ಕಾರಣದಿಂದಾಗಿ ಮುಂಬರುವ ಶ್ರೀಲಂಕಾ ಮತ್ತು ಜಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಆಡುತ್ತಿಲ್ಲ. ಲಂಕಾದಲ್ಲಿ ಜೂನ್ ಮತ್ತು ಜುಲೈನಲ್ಲಿ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ಆಡಬೇಕಿತ್ತು. ಹಾಗೇ ಆಗಸ್ಟ್ 22ರಿಂದ ಜಿಂಬಾಬ್ವೆ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಬೇಕಿತ್ತು. ಆದ್ರೆ ಕೋವಿಡ್-19 ಅಡ್ಡಿಯನ್ನುಂಟು ಮಾಡಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಟೀಮ್ ಇಂಡಿಯಾ ಆಟಗಾರರು ಇನ್ನೂ ಮೈದಾನಕ್ಕೆ ಇಳಿದಿಲ್ಲ. ಅದು ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದ ಪಂದ್ಯವನ್ನಾಡಲು ಟೀಮ್ ಇಂಡಿಯಾ ಆಟಗಾರರಿಗೆ ಕನಿಷ್ಠ ನಾಲ್ಕರಿಂದ ಆರು ವಾರಗಳ ಕಾಲ ತರಬೇತಿ ಶಿಬಿರದ ಅವಶ್ಯಕತೆ ಇದೆ. ಹಾಗೇ ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ. ಪರಿಸ್ಥಿತಿ ಸುಧಾರಿಸಿದ್ರೆ ಮಾತ್ರ ಆಟಗಾರರಿಗೆ ತರಬೇತಿ ನಡೆಸಲು ಅವಕಾಶ ನೀಡುವುದಾಗಿ ಜಯ್ ಶಾ ಹೇಳಿದ್ದಾರೆ.

Tags: Cricketindia cricketteam indiazimbabwe
ShareTweetSendShare
Join us on:

Related Posts

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

ಧರ್ಮಸ್ಥಳ ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ, 3 ತಿಂಗಳ ಗಡುವು

by Shwetha
September 22, 2026
0

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್...

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

by Shwetha
September 22, 2026
0

ಚಿಕ್ಕಬಳ್ಳಾಪುರ: ಮೈಸೂರಿನ ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿ ಹಾಗೂ ದಲಿತ ಸಂಘಟನೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್...

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

ಮಳೆಯೊಂದಿಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಾಧ್ಯತೆ: ಕರಾವಳಿ ಜನರು, ಮೀನುಗಾರರಿಗೆ ಮುನ್ನೆಚ್ಚರಿಕೆ

by Shwetha
September 22, 2026
0

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 40ರಿಂದ 50 ಕಿಲೋಮೀಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram