ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ನಿಂದ ಆಯ್ಕೆಯಾಗಿರುವ ಮಾಜಿ ಪ್ರಧಾನಿ ದೇವೇಗೌಡರಿಗೂ ಶುಭ ಹಾರೈಕೆಗಳು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಟ್ವೀಟ್ ನಲ್ಲಿ..
‘ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ಶ್ರೀ ಈರಣ್ಣ ಕಡಾಡಿ ಹಾಗೂ ಶ್ರೀ ಅಶೋಕ್ ಗಸ್ತಿ ಅವರಿಗೆ ಅಭಿನಂದನೆಗಳು. ಹಾಗೆಯೇ ಕಾಂಗ್ರೆಸ್ಸಿನಿಂದ ಆಯ್ಕೆಯಾಗಿರುವ ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತು ಜೆಡಿಎಸ್ ನಿಂದ ಆಯ್ಕೆಯಾಗಿರುವ ಮಾಜಿ ಪ್ರಧಾನಿ ಶ್ರೀ ದೇವೇಗೌಡರಿಗೂ ಶುಭ ಹಾರೈಕೆಗಳು’ ಎಂದು ಬರೆದುಕೊಂಡಿದ್ದಾರೆ.
ಇನ್ನು ರಾಜ್ಯಸಭೆಯ ನಾಲ್ಕು ಸ್ಥಾನಗಳಲ್ಲಿ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಎರಡು ಕಾಂಗ್ರೆಸ್ ಒಂದು ಸ್ಥಾನ ಪಡೆದಿದ್ದು, ಕಾಂಗ್ರೆಸ್ ನ ಹೆಚ್ಚುವರಿ ಮತಗಳ ಬೆಂಬಲದ ಆಧಾರದಲ್ಲಿ ಜೆಡಿಎಸ್ ನಿಂದ ದೇವೇಗೌಡ ಕಣಕ್ಕಿಳಿದಿದ್ದರು. ಬಿಜೆಪಿ ಹೆಚ್ಚುವರಿ ಅಭ್ಯರ್ಥಿ ಹಾಕದ ಹಿನ್ನೆಲೆಯಲ್ಲಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯನ್ನು ಪ್ರಕಟಿಸಲಾಗಿದೆ.