Congress : ಸಿ.ಟಿ ರವಿ ಫ್ಲೆಕ್ಸ್ ಗೆ ಮದ್ಯ ಸುರಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ…
ಮೈಸೂರು : ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಗಿದೆ.
ಸಿ ಟಿ ರವಿ ಫ್ಲೆಕ್ಸ್ ಗೆ ವಿವಿಧ ಮಾದರಿಯ ಮದ್ಯವನ್ನು ಸುರಿದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯದ ಅಭಿಷೇಕ ಮಾಡಿದ ಬಳಿಕ ಅಂತಿಮವಾಗಿ ಸೆಗಣಿ ನೀರು ಸುರಿದು ಸಿ. ಟಿ. ರವಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಸಿ.ಟಿ ರವಿ ಕೂಡಲೇ ಕ್ಷಮೆಯಾಚಿಸಬೇಕು ಎಂದೂ ಇದೇ ವೇಳೆ ಆಗ್ರಹಿಸಿದ್ದಾರೆ.ಅಷ್ಟೇ ಅಲ್ದೇ ಕ್ಷಮೆ ಕೇಳದಿದ್ದರೆ ಸಿ ಟಿ ರವಿ ರಾಜ್ಯದ ಯಾವುದೇ ಭಾಗಕ್ಕೆ ಭೇಟಿ ನೀಡಿದರೂ ಸೆಗಣಿ ಸುರಿಯುವಂತೆ ಕಾಂಗ್ರೆಸ್ ಕಾರ್ಯಕರ್ಯರಿಗೆ ಕರೆ ಕೊಡುತ್ತೇವೆ ಎಂದು ಶಾಸಕ ಎಂ ಕೆ ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.
Congress: Protest by Congress workers by pouring liquor on CT Ravi Flex…








