Narendra modi : ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು…
ಪ್ರಧಾನಿ ನರೇಂದ್ರ ಮೋದಿಯವರ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬುಧವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಮಧ್ಯಾಹ್ನದ ವೇಳೆಗೆ ಪ್ರಧಾನಿ ಆಸ್ಪತ್ರಗೆ ಭೇಟಿ ನೀಡುವ ಸಾಧ್ಯತೆ ಇದೆ.
ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.
Narendra modi : Prime Minister Modi’s mother Heeraben admitted to hospital…