Railway Jobs : ರೈಲ್ವೇ ಇಲಾಖೆಯಿಂದ 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!!!
10ನೇ ಕ್ಲಾಸ್ ಪಾಸಾದವರು ಅರ್ಜಿ ಸಲ್ಲಿಸಲರ್ಹರು
ಜನವರಿ 29 ಅರ್ಜಿ ಸಲ್ಲಿಸಲು ಕೊನೆಯ ದಿನ
ವಯೋಮಿತಿ: ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ
ಒಟ್ಟು 4103 ಅಪ್ರೆಂಟಿಸ್ ಹುದ್ದೆಗಳು ಖಾಲಿ
ನವದೆಹಲಿ : ದಕ್ಷಿಣ ಮಧ್ಯ ರೈಲ್ವೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ..
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜನವರಿ 29 ..
ಎಸಿ ಮೆಕ್ಯಾನಿಕ್ -250
ಕಾರ್ಪೆಂಟರ್- 18
ಡೀಸೆಲ್ ಮೆಕ್ಯಾನಿಕ್- 531
ಎಲೆಕ್ಟ್ರಿಷಿಯನ್-1019
ಎಲೆಕ್ಟ್ರಾನಿಕ್ ಮೆಕ್ಯಾನಿಕ್- 92
ಫಿಟ್ಟರ್- 1460
ಮ್ಯಾಚಿನ್ಸ್ಟ್- 71
ಮೆಕ್ಯಾನಿಕ್ ಮೆಷಿನ್ ಟೂಲ್ ಮೇಂಟೇನೆನ್ಸ್- 5
ಮಿಲ್ ರೈಟ್ ಮೇಂಟೇನೆನ್ಸ್ (MWM)- 24
ಪೇಂಟರ್- 80
ವೆಲ್ಡರ್- 553
ಹುದ್ದೆಗಳು ಖಾಲಿಯಿದೆ..
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ/ NCVT/SCVT ಪೂರ್ಣಗೊಳಿಸಿರಬೇಕು.
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30, 2022ಕ್ಕೆ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.