ಸವದತ್ತಿ ಎಲ್ಲಮ್ಮ ದರ್ಶನಕ್ಕೆ ಹೋಗುವಾಗ ಬೀಕರ ಅಪಘಾತ : 6 ಮಂದಿ ಸಾವು…
ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೋಗುವಾಗ ಬುಲೇರೋ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಬಾಲಕಿಯರು ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ ಐದು ಲಕ್ಷ ಪರಿಹಾರ ಘೋಷಿಸಿದೆ. ಚುಂಚನೂರು ಸಮೀಪದ ವಿಠಲ್ ರುಕ್ಮಿಣಿ ದೇವಸ್ಥಾನದ ಆಲದ ಮರಕ್ಕೆ ಬುಲೋರೊ ವಾಹನ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿ ಆಗಿದೆ.
ವಾಸ್ತವವಾಗಿ, ಪಾದಯಾತ್ರೆ ಮೂಲಕ ಹೊರಟಿದ್ದ ಭಕ್ತರನ್ನು ಬುಲೋರೋ ವಾಹನ ಚಾಲಕನೇ ಕರೆದು ವಾಹನದಲ್ಲಿ ಕೂರಿಸಿದ್ದಾನೆ. ಬುಲೋರೋ ವಾಹನದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಸಂಭವಿಸಿದ ಈ ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತ ದುರ್ದೈವಿಗಳನ್ನು ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹಣಮವ್ವ ಮೇಗಾಡಿ (25), ದೀಪಾ (31), ಸವಿತಾ (12), ಸುಪ್ರೀತಾ (11), ಮಾರುತಿ (43), ಇಂದ್ರವ್ವಾ (24) ಎಂದು ಗುರುತಿಸಿಸಲಾಗಿದೆ. ಅಫಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಗೋಕಾಕ್ ಆಸ್ಪತ್ರಗಳಲ್ಲಿ ಸೇರಿಸಲಾಗಿದೆ. ಕಟಕೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Belagavi Accident : Horrible accident while going to see Savadatti Yallamma – 6 killed…








