Private School : ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ಪಡಿಸುವ ಅಧಿಕಾರ ಸರ್ಕಾರಕ್ಕಿಲ್ಲ – ಹೈಕೋರ್ಟ್ ಆದೇಶ…
ಕರ್ನಾಟಕದಲ್ಲಿ ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿ ಮಾಡುವ ಅಧಿಕಾರ ಆಯಾ ಶಾಲಾ ಆಡಳಿತ ಮಂಡಳಿಗೆ ಬಿಟ್ಟದ್ದು, ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂತೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ.
ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಮತ್ತು ಇತರ ಶಾಲಾ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ನೇತೃತ್ವದ ಏಕಸದಸ್ಯ ಪೀಠ ಈ ತೀರ್ಪು ನೀಡಿದ್ದಾರೆ.
ಅವಿನಾಶ್ ಮೆಹ್ರೋತ್ರಾ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿದ ಹೈಕೋರ್ಟ್ ನ್ಯಾಯಪೀಠ, ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಸೆಕ್ಷನ್ 5 (ಎ) ಮತ್ತು ಸೆಕ್ಷನ್ 112 (ಎ)ಯ ಕ್ರಮಗಳು ಸಂವಿಧಾನದ ಅನುಚ್ಛೇದ 14 ಮತ್ತು 19 (1)(ಜಿ)ಗಳಿಗೆ ವ್ಯತಿರಿಕ್ತವಾಗಿದೆ ಎಂಬುದನ್ನು
ಈ ಪ್ರಕಾರ ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ನಿರ್ಧಾರ ಮತ್ತು ಅದನ್ನು ಉಲ್ಲಂಘಿಸಿದಾಗ ಶಿಕ್ಷೆ ವಿಧಿಸುವ ಅಧಿಕಾರದ ಅಂಶ ಅಸಾಂವಿಧಾನಿಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಈ ಆದೇಶದ ಕಾರಣ ಈಗ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಗದಿ ವಿಚಾರದಲ್ಲಿ ಸ್ವತಂತ್ರವಾಗಿವೆ. ಸರ್ಕಾರದ ಹಿಡಿತದಿಂದ ಹೊರಬಂದಿವೆ. ಸರ್ಕಾರಕ್ಕೂ ಈಗ ಈ ವಿಚಾರವಾಗಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತವಿರುವುದಿಲ್ಲ.
Private School: Government has no authority to fix fees in private schools – High Court order…








