Shivarajkumar : ಮತ್ತೊಂದು ಹೊಸ ಚಿತ್ರ ಘೋಷಣೆ ಮಾಡಿದ ಶಿವರಾಜ್ ಕುಮಾರ್…
ಈಗಾಗಲೇ ಸಾಕಷ್ಟು ಪ್ರಾಜೆಕ್ಟ್ ಗಳಲ್ಲಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೀಗ ಮತ್ತೊಂದು ಹೊಸ ಸಿನಿಮಾ ಘೋಷಿಸುವ ಮೂಲಕ ಫ್ಯಾನ್ಸ್ ಗೆ ಖುಷಿ ಕೊಟ್ಟಿದ್ದಾರೆ..
ಕೆಲದಿನಗಳ ಹಿಂದೆಯಷ್ಟೆ ಘೋಷ್ಟ್ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಇದೀಗ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದು, ಈ ಹೊಸ ಚಿತ್ರಕ್ಕೆ ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ಬಂಡವಾಳ ಹೂಡುತ್ತಿದ್ದಾರೆ..
ತೇಜಸ್ವಿ ಕೆ ನಾಗ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಕಿರುತೆರೆ ಲೋಕದಲ್ಲಿ ತೇಜಸ್ವಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದಾರೆ. ಸಿನಿಮಾ ಕುರಿತು ಮಾತನಾಡಿರುವ ತೇಜಸ್ವಿ ಶಿವಣ್ಣ ಈ ಚಿತ್ರದ ಕಥೆ ಕೇಳಿ ಅಭಿನಯಿಸಲು ಒಪ್ಪಿಗೆ ನೀಡಿದ್ದಾರೆ. ಶಿವರಾಜ್ ಕುಮಾರ್ ಅವರು ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದ ಶೀರ್ಷಿಕೆ ಹಾಗೂ ಉಳಿದ ವಿಷಯಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಶಿವರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಇಷ್ಟವಾಗುವಂತೆ ಕಥೆ ಬರೆದುಕೊಳ್ಳಲಾಗಿದೆ ಎಂದಿದ್ದಾರೆ.
Shivarajkumar : Shivarajkumar has announced another new film…







