ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರುಳಿ ಬಹುನಿರೀಕ್ಷೆಯ ‘ಬಘೀರ’ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾಗ ಸಂಭವಿಸಿದ ಅನಾಹುತದಲ್ಲಿ ಗಾಯಗೊಂಡಿದ್ದಾರೆ.. ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಪ್ರಶಾಂತ್ ನೀಲ್ ಚಿತ್ರಕಥೆಯ ಬಘೀರ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ..
ಈ ಚಿತ್ರಕ್ಕೆ ಹೊಂಬಾಳೆ ಸಂಸ್ಥೆ ಬಂಡವಾಳ ಹೂಡುತ್ತಿದೆ.. ಇದೇ ಸಿನಿಮಾದ ಚಿತ್ರೀಕರಣದ ವೇಳೆ ಶ್ರೀಮುರಳಿಗೆ ಗಾಯವಾಗಿದೆ.
ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೆರೆಡು ದಿನಗಳಲ್ಲಿ ಶೂಟಿಂಗ್ ಮುಕ್ತಾಯವೂ ಆಗಲಿತ್ತು.. ಈ ವೇಳೆ ಶ್ರೀಮುರಳಿಗೆ ಪೆಟ್ಟಾಗಿದೆ
ಈ ಹಿಂದೆ ಮಹೇಶ್ ಕುಮಾರ್ ನಿರ್ದೇಶನದ ಮದಗಜ ಶೂಟಿಂಗ್ ವೇಳೆಯೂ ಶ್ರೀಮುರಳಿ ಅವರ ಎಡಗಾಲಿಗೆ ಪೆಟ್ಟಾಗಿತ್ತು. ಈಗ ಮತ್ತೆ ಅದೇ ಕಾಲಿಗೆ ಪೆಟ್ಟಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರುಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Bagheera , Shrimuruli injured while shooting







