Team India : ಐಸಿಸಿ ಬೌಲರ್ ಗಳ ಲಿಸ್ಟ್ ನಲ್ಲಿ ನಂ.1 ಸ್ಥಾನಕ್ಕೇರಿದ ಮೊಹಮ್ಮದ್ ಸಿರಾಜ್
ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಶಕ್ತಿಯಾಗಿರುವ ಮೊಹಮ್ಮದ್ ಸಿರಾಜ್ ಐಸಿಸಿ ODI ಬೌಲರ್ಗಳ ಲಿಸ್ಟ್ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ತಂಡದ ಪ್ರಮುಖ ವೇಗದ ಬೌಲರ್ ಆಗಿ ಕಾಣಿಸಿಕೊಂಡಿರುವ 28 ವರ್ಷದ ಮೊಹಮ್ಮದ್ ಸಿರಾಜ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತವರಿನಲ್ಲಿ ಇತ್ತೀಚೆಗೆ ನಡೆದ ಶ್ರೀಲಂಕಾ ಹಾಗೂ ನ್ಯೂಜಿ಼ಲೆಂಡ್ ವಿರುದ್ಧದ ODI ಸರಣಿಯಲ್ಲಿ ಮಿಂಚಿದ್ದ ಮೊಹಮ್ಮದ್ ಸಿರಾಜ್, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಶ್ರೀಲಂಕಾ ಹಾಗೂ ನ್ಯೂಜಿ಼ಲೆಂಡ್ ವಿರುದ್ಧ ನಡೆದ ಸರಣಿಯಲ್ಲಿ ಸಿರಾಜ್ ಸತತವಾಗಿ 4 ವಿಕೆಟ್ಗಳನ್ನ ಪಡೆದಿದ್ದರು.
ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 9 ವಿಕೆಟ್ ಪಡೆದಿದ್ದ ಸಿರಾಜ್, 10.22ರ ಸರಾಸರಿಯಲ್ಲಿ ಬೌಲಿಂಗ್ ಮಾಡಿದ್ದರು. ಇನ್ನೂ ನ್ಯೂಜಿ಼ಲೆಂಡ್ ವಿರುದ್ಧವೂ ಇದೇ ಪ್ರದರ್ಶನ ನೀಡಿದ ಯುವ ವೇಗಿ ಎರಡು ಪಂದ್ಯಗಳಲ್ಲಿ 5 ವಿಕೆಟ್ ಪಡೆದಿದ್ದರು. ಆದರೆ ಉತ್ತಮ ಫಾರ್ಮ್ನಲ್ಲಿರುವ ಮೊಹಮ್ಮದ್ ಸಿರಾಜ್ ಅವರಿಗೆ ಕೊನೆಯ ODI ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು.
ತಮ್ಮ ವೃತ್ತಿ ಜೀವನದ ಸರ್ವಶ್ರೇಷ್ಠ ಫಾರ್ಮ್ನಲ್ಲಿರುವ ಮೊಹಮ್ಮದ್ ಸಿರಾಜ್, 729 ರೇಟಿಂಗ್ ಪಾಯಿಂಟ್ಸ್ಗಳೊಂದಿಗೆ ಅಗ್ರ ಸ್ಥಾನಕ್ಕೇರಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಜೋಶ್ ಹೇಜ಼ಲ್ವುಡ್ 2ನೇ ಸ್ಥಾನದಲ್ಲಿದ್ದರೆ. ನ್ಯೂಜಿ಼ಲೆಂಡ್ನ ವೇಗದ ಬೌಲರ್ ಟ್ರೆಂಟ್ ಬೋಲ್ಟ್ 3ನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್ ಸಿರಾಜ್ ಹೊರತಾಗಿ ಟೀಂ ಇಂಡಿಯಾದ ಯಾವುದೇ ಬೌಲರ್ಗಳು ಟಾಪ್-10ನಲ್ಲಿ ಕಾಣಿಸಿಕೊಂಡಿಲ್ಲ.
ICC Men’s ODI, Mohammed Siraj, Team India, New Zealand, Sri Lanka
Team India , Icc bowlers in 1st place , saakshatv








