IND vs AUS 1st Test : ಲಾಂಗ್ ಬ್ರೇಕ್ ಬಳಿಕ ಟೀಂ ಇಂಡಿಯಾಕ್ಕೆ ಕಮ್‌ಬ್ಯಾಕ್ ಮಾಡಿದ ಜಡೇಜಾ
ಗಾಯದ ಸಮಸ್ಯೆಯಿಂದ ಹಲವು ತಿಂಗಳುಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಗುಳಿದಿದ್ದ ಆಲ್ರೌಂಡರ್ ರವೀಂದ್ರ ಜಡೇಜಾ, ಟೀಂ ಇಂಡಿಯಾಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಗುರುವಾರ ಆರಂಭಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ರವೀಂದ್ರ ಜಡೇಜಾ ಪ್ಲೇಯಿಂಗ್ ಇಲವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. 2022ರಲ್ಲಿ ಗಾಯದ ಸಮಸ್ಯೆಗೆ ಸಿಲುಕಿದ್ದ ಜಡೇಜಾ, ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಸೇರಿದಂತೆ ಹಲವು ಟೂರ್ನಿಗಳಿಂದ ಹೊರಗುಳಿದಿದ್ದರು.
ಆದರೆ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿದ್ದ ರವೀಂದ್ರ ಜಡೇಜಾ ಇತ್ತೀಚೆಗೆ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಸೌರಾಷ್ಟ್ರ ಪರವಾಗಿ ಆಡಿದ್ದ ಜಡೇಜಾ, ಅದ್ಭುತ ಬೌಲಿಂಗ್‌ನಿಂದ ಮಿಂಚಿದ್ದರಲ್ಲದೇ ಭಾರತ ತಂಡಕ್ಕೆ ಮರಳಲು ತಾವು ಸಿದ್ಧವಿರುವುದಾಗಿ ತೋರಿಸಿದ್ದರು.
ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ರವೀಂದ್ರ ಜಡೇಜಾ ಅವರನ್ನ ಆಯ್ಕೆ ಮಾಡಲಾಗಿತ್ತು. ಇದೀಗ ಸುಧೀರ್ಘ ಬ್ರೇಕ್ ಬಳಿಕ ಟೀಂ ಇಂಡಿಯಾಕ್ಕೆ ಮರಳಿರುವ ಆಲ್ರೌಂಡರ್, ಆಸೀಸ್ ವಿರುದ್ಧದ ಮಹತ್ವದ ಸರಣಿಯಲ್ಲಿ ಆಸೀಸ್ ಆಟಗಾರರ ವಿರುದ್ಧ ಅಬ್ಬರಿಸೋಕ್ಕೆ ಸಜ್ಜಾಗಿದ್ದಾರೆ.








