Gujarath : 3 ತಿಂಗಳ ಭ್ರೂಣವನ್ನ ರಸ್ತೆಗೆಸೆದು ಜೋಡಿ ಎಸ್ಕೇಪ್….
ಗುಜರಾತ್ ನಲ್ಲೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ..
ಸೂರತ್ ನಲ್ಲಿ ಜೋಡಿಯೊಂದು ಮೂರು ತಿಂಗಳ ಭ್ರೂಣವನ್ನ ರಸ್ತೆಗೆಸೆದು ಪರಾರಿಯಾಗಿದೆ..
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವೈರಲ್ ಆಗ್ತಿದೆ.. ಜೋಡಿಯ ಮುಖ ಅಸ್ಪಷ್ಟವಾಗಿದೆ..
ಈ ಇಬ್ಬರೂ ಭ್ರೂಣವನ್ನು ನಿರ್ದಾಕ್ಷಿಣ್ಯವಾಗಿ ರಸ್ತೆಯಲ್ಲಿ ಬಿಸಾಡಿ ಹೋಗಿದ್ದಾರೆ..
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಈ ಜೋಡಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಭ್ರೂಣವನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಘಟನೆಯ ಕುರಿತು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗೋದಾರಾ ಪ್ರದೇಶದ ಲಕ್ಷ್ಮೀನಾರಾಯಣ ಸೊಸೈಟಿಯ ಗೇಟ್ ಬಳಿ ಭ್ರೂಣ ಬಿದ್ದಿರುವ ಬಗ್ಗೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಭ್ರೂಣವನ್ನು ವಶಪಡಿಸಿಕೊಂಡು ಸಮೀಪದ ಸಮೀರ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಯುವಕ ಕೈಯಲ್ಲಿ ಫೈಲ್ ಹಿಡಿದು ನಿಂತಿದ್ದರೆ, ಯುವತಿ ಭ್ರೂಣವನ್ನು ರಸ್ತೆಬದಿ ಕತ್ತಲಲ್ಲಿ ಎಸೆದಿದ್ದಾಳೆ.
Gujarath , The couple fled after throwing the fetus on the road








