Pulwama Attack : ಪುಲ್ವಾಮಾ ದಾಳಿ ನಡೆದು ಇಂದಿಗೆ 4 ವರ್ಷ – ವೀರ ಯೋಧರಿಗೆ ಗಣ್ಯರ ಗೌರವ ನಮನ
ಇಂದು ಭಾರತದ ಪಾಲಿಗೆ ಕರಾಳ ದಿನ… ಯಾಕಂದ್ರೆ ನಮ್ಮ ವೀರ ಸೈನಿಕರು ವೈರಿಗಳ ಕುತಂತ್ರದಿಂದ ದೇಶಕ್ಕಾಗಿ ಪ್ರಣತೆತ್ತ ಪುಲ್ವಾಮಾ ದಾಳಿ ನಡೆದು ಇಂದಿಗೆ ಸರಿಯಾಗಿ 4 ವರ್ಷಗಳು…
ಅಂದು ಪುಲ್ವಾಮದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದಾಗ ದೇಶಾದ್ಯಂತ ಜನರ ಆಕ್ರೋಶ ಭುಗಿಲೆದ್ದು , ಪ್ರತಿಶೋಧದ ಚೀತ್ಕಾರ ಕೇಳಿಬಂದಿತ್ತು..
ಅಷ್ಟೇ ನಮ್ಮ ವೀರ ಯೋಧರು ಉಗ್ರರ ತಾಯ್ನಾಡಿಗೆ ನುಗ್ಗಿ ಭಯೋತ್ಪಾದಕರಿದ್ದ ಅಡುಗುತಾಣಗಳಿಗೆ ಬೆಂಕಿ ಹಚ್ಚಿ 300 ಕ್ಕೂ ಅಧಿಕ ಟೆರರಿಸ್ಟ್ ಗಳ ಛಿದ್ರಗೊಳಿಸಿದ್ದರು…
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದಾದ್ಯಂತ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ , ಸಲ್ಲಿಸುತ್ತಿದ್ದಾರೆ..
ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂಬಂಧ ಟ್ವೀಟ್ ಮಾಡಿದ್ದು ,
“ ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ಪರಾಕ್ರಮಿಗಳನ್ನು ನೆನಪಿಸಿಕೊಳ್ಳುತ್ತೇವೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ”. ಎಂದಿದ್ದಾರೆ…
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೂ ಕೂಡ ಟ್ವೀಟ್ ಮಾಡಿದ್ದು , ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಸೈನಿಕರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ. ಹುತಾತ್ಮ ಯೋಧರ ಶೌರ್ಯ, ತ್ಯಾಗ, ಅದಮ್ಯ ಧೈರ್ಯ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಯಾವಾಗಲೂ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದಿದ್ದಾರೆ..
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು , 2019ರ ಈ ದಿನ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ. ಯೋಧರ ಧೈರ್ಯ ಮತ್ತು ತ್ಯಾಗಕ್ಕೆ ದೇಶವೇ ನಮಿಸುತ್ತದೆ. ಇಡೀ ದೇಶ ಹುತಾತ್ಮ ಯೊಧರ ಕುಟುಂಬದೊಂದಿಗೆ ಇದೆ” ಎಂದಿದ್ದಾರೆ..
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು ,
ಪುಲ್ವಾಮಾದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರಿಗೆ ಶ್ರದ್ಧಾಪೂರ್ವಕ ನಮನಗಳು. ದೇಶಕ್ಕಾಗಿ ಮಡಿದ ವೀರ ಯೋಧರನ್ನು ಸ್ಮರಿಸುತ್ತಾ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸದೃಢ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಮಾಡೋಣ ಎಂದಿದ್ದಾರೆ.
Pulwama Attack , Pm Modi and other VIP’s pays tribute








