Hosapete : ಬಿಜೆಪಿ ಬಿಟ್ಟರೆ ನನ್ನ ಹೆತ್ತ ತಾಯಿಗೆ ಮೋಸ ಮಾಡಿದಂತೆ – ಆನಂದ್ ಸಿಂಗ್…
ವಿಜಯನಗರ ಜಿಲ್ಲೆ ಹೊಸಪೇಟೆ ಶಾಸಕ ಸಚಿವ ಆನಂದ್ ಸಿಂಗ್ ಬಿಜೆಪಿ ಟಿಕೆಟ್ ಸಿಗದಿದ್ರೆ ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಅಂತೆ ಕಂತೆಗಳ ಕುರಿತು ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದ್ದು “ ಪ್ರಮಾಣ ಮಾಡಿ ಹೇಳುತ್ತೇನೆ ಮಾರಾಯ ನಾನು ಕಾಂಗ್ರೆಸ್ ಗೆ ಹೋಗಲ್ಲ. ಬಿಜೆಪಿ, ಯಡಿಯೂರಪ್ಪ ಕೊಟ್ಟ ಮಾತಿನಂತೆ ವಿಜಯನಗರ ಜಿಲ್ಲೆ ರಚನೆ ಮಾಡಿದ್ದಾರೆ ಏತ ನೀರಾವರಿ ಯೋಜನೆ 250 ಕೋಟಿ ಸೇರಿ ಸಾವಿರಾರು ಕೋಟಿ ಅನುದಾನ ಕೊಟ್ಟಿದ್ದಾರೆ. ಹಿಂಗಿದ್ದಾಗ ಪಕ್ಷ ಬಿಟ್ಟು ಹೋದ್ರೆ ಹೆತ್ತ ತಾಯಿಗೆ ಮೋಸ ಮಾಡಿದಂತೆ ಎಂದು ಆನಂದ ಸಿಂಗ್ ಹೇಳಿದ್ದಾರೆ.
ಬಿಜೆಪಿ ಬಿಟ್ಟರೆ ನನ್ನ ಹೆತ್ತ ತಾಯಿಗೆ ಮೋಸ ಮಾಡಿದಂತೆ ಇದು ನನ್ನ ಹೆತ್ತ ತಾಯಿಗೆ ಮೋಸ ಮಾಡಿದಂತೆ. ಜಿಲ್ಲೆ ಘೋಷಣೆಗಾಗಿ ಮಂತ್ರಿಸ್ಥಾನ ತ್ಯಾಗ ಮಾಡಿದ್ದೇನೆ. ಜಿಲ್ಲೆಯಾಗಿ ಇತಿಹಾಸದ ಪುಟದಲ್ಲಿ ನನ್ನ ಹೆಸರು ಸೇರ್ಪಡೆ ಆಗಿದೆ. ಅಂತಹ ಪಕ್ಷಕ್ಕೆ ದ್ರೋಹ ಮಾಡಿದ್ರೆ ನನ್ನ ಹೆತ್ತ ತಾಯಿಗೆ ದ್ರೋಹ ಮಾಡಿದಂತೆ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ನಾನು ಹೋಗೋದಿಲ್ಲ ಎಂದು ಆನಂದ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
Hosapete : Leaving BJP is like cheating my parents – Anand Singh…








