Chetan Sharma : ಆಯ್ಕೆ ಸಮಿತಿ ಮುಖ್ಯಸ್ಥನ ಸ್ಥಾನಕ್ಕೆ ರಾಜೀನಾಮೆ
ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಖಾಸಗಿ ಮಾಧ್ಯಮ ಮಾಡಿದ ಸ್ಟಿಂಗ್ ಆಪರೇಶನ್ನಲ್ಲಿ ಚೇತನ್ ಶರ್ಮಾ ಭಾರತ ಕ್ರಿಕೆಟ್ ಬಗೆಗಿನ ಹಲವಾರು ವಿಚಾರಗಳನ್ನು ಮಾತನಾಡಿ ಯಡವಟ್ಟು ಮಾಡಿಕೊಂಡಿದ್ದರು.
ಇದು ಭಾರತೀಯ ಕ್ರಿಕೆಟ್ನಲ್ಲಿ ಭಾರೀ ಕೋಲಾಹಲ ಎಬ್ಬಿಸಿತ್ತು ಜೊತೆಗೆ ವಿವಾದಗಳನ್ನು ಸೃಷ್ಟಿಸಿತ್ತು
ಚೇತನ್ ಶರ್ಮಾ ಇತ್ತಿಚೆಗಷ್ಟೆ ಆಯ್ಕೆ ಸಮಿತಿ ಮುಖ್ಯಸ್ಥಾನಾಗಿ ಮರು ನೇಮಕವಾಗಿದ್ದರು. ಆದರೆ ಖಾಸಗಿ ಚಾನೆಲ್ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಚೇತನ್ ಶರ್ಮಾ ಅವರನ್ನು ಇಕ್ಕಟ್ಟಿನಲ್ಲಿ ಸಿಲುಕುವಂತೆ ಮಾಡಿತು.
ಚೇತನ್ ಶರ್ಮಾ ತಮ್ಮ ರಾಜೀನಾಮೆ ಪತ್ರವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದಾರೆ.
30 ನಿಮಿಷಗಳ ರಹಸ್ಯ ಕಾರ್ಯಾಚರಣೆಯಲ್ಲಿ ಚೇತನ್ ಶರ್ಮಾ,
ನಾಯಕ ರೋಹಿತ್ ಶರ್ಮಾ ಬಗ್ಗೆ ಮತ್ತು ಹಾರ್ದಿಕ್ ಪಾಂಡ್ಯ ಭವಿಷ್ಯದ ನಾಯಕ ಎಂದು ಹೇಳಿದ್ದರು.
ಆಟಗಾರರು ಶೇ.80ರಿಂದ 8ರಷ್ಟು ಫಿಟ್ ಆಗಿದ್ದರೂ ಇಂಜೆಕ್ಷನ್ ಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಜೊತೆಗೆ ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ನಡುವಿನ ಒಳಜಗಳದ ಬಗ್ಗೆಯೂ ಹೇಳಿದ್ದರು.
Chetan Sharma resign’s to the post of selection commity








