ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ : ಶೀಘ್ರದಲ್ಲೆ ಅತಿಥಿ ಸಹಾಯ ಪ್ರಾಧ್ಯಾಪಕರ ಹುದ್ದೆ ಭರ್ತಿ….
ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. 6 ಸಾವಿರದ 500 ಸಹಾಯಕ ಪ್ರಾಧ್ಯಾಪಕರ ಭರ್ತಿಯ ಪೈಕಿ ಈಗಾಗಲೇ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಅದರಲ್ಲಿ 1 ಸಾವಿರದ 250 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೂಡ ಪೂರ್ಣ ಗೊಂಡಿದ್ದು, ನೇಮಕಾತಿ ಆದೇಶ ಕೂಡ ಹೊರಡಿಸಲಾಗುವುದು ಎಂದು ವಿಧಾನ ಸಭೆ ಕಲಾಪದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.
ವಿಧಾನಸಭಾ ಕಲಾಪದಲ್ಲಿ ಸದಸ್ಯ ಡಾ. ಅವಿನಾಶ್ ಜಾಧವ್ ಹಾಗೂ ಬಿ.ಎಸ್. ಪಾಟೀಲ್ ನಡಹಳ್ಳಿ ಅವರ ಪ್ರಶ್ನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ರಾಜ್ಯದಲ್ಲಿ ಅತಿಥಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 8 ಸಾವಿರ ಹೆಚ್ಚುವರಿ ಹುದ್ದೆಗಳು ಅವಶ್ಯಕತೆಯಿದ್ದು, ಅದನ್ನು ಅಗತ್ಯಕ್ಕನುಗುಣವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸದನಕ್ಕೆ ತಿಳಿಸಿದರು.
Assistant Professor vacancies will be filled soon: Ashwath Narayan








