Roopa vs Rohini : ರೋಹಿಣಿ ಸಿಂಧೂರಿ, ರೂಪಾ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಿದ ಸಿ ಎಂ ಬೊಮ್ಮಾಯಿ…
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವಿನ ಕಿತ್ತಾಟಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಜೊತೆ ಇಬ್ಬರು ಅಧಿಕಾರಿಗಳ ವಿರುದ್ದ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ಬಹಿರಂಗವಾಗಿ ಮಾತನಾಡುವುದು, ಕಿತ್ತಾಡುವುಸು ಶೋಭೆ ತರುವುದಿಲ್ಲ ಅಂತ ಆಕ್ರೋಶ ಹೊರ ಹಾಕಿರುವ ಸಿ ಎಂ, ಸಿಂಧೂರಿ ಮತ್ತು ರೂಪಾ ನಡುವಿನ ಕಿತ್ತಾಟದ ಬಗ್ಗೆ ಸಿಎಂ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಇಬ್ಬರು ಅಧಿಕಾರಿಗಳ ವರ್ತನೆಯಿಂದ ಸರ್ಕಾರಕ್ಕೆ ಮುಜುಗರ ಆಗ್ತಿದೆ. ಹೀಗಾಗಿ ಇವರ ವಿರುದ್ದ ಕ್ರಮ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಏನು ಸಾಧ್ಯವೋ ಅದರಂತೆ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇಬ್ಬರು ಅಧಿಕಾರಿಗಳಿಗೆ ನೊಟೀಸ್ ನೀಡಲು ಸಿಎಂ ಸೂಚನೆ ನೀಡಿದ್ದು, ಇಬ್ಬರಿಂದ ಉತ್ತರ ಬಂದ ಬಳಿಕ ಕ್ರಮ ತೆಗೆದುಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.
Roopa vs Rohini : Rohini Sindhuri, CM Bommai suggested legal action against Roopa…








