ನವದೆಹಲಿ: ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಎರಡು ತಿಂಗಳಾಗಿದೆ. ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ತುಂಬಾ ಗೊಂದಲಗಳಿವೆ. ಇನ್ನು ವಿಳಂಬ ಮಾಡಿದರೆ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ನೇಮಕಕ್ಕೆ ಸಂಬಂಧಿಸಿದಂತೆ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದಾಗಿ ಸೋನಿಯಾ ಗಾಂಧಿ ಅವರು ತಿಳಿಸಿದ್ದಾರೆ ಎಂದರು.
ಪಂಚಮಸಾಲಿ ಪ್ರತಿಭಟನೆ ಗಾಯದ ಮೇಲೆ ‘ಉಪ್ಪು’ ಸವರಿದ CM & ಕಿಚ್ಚು ಹೊತ್ತಿಸಿದ ‘ಪರಂ’..!
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್...