Ravindra Jadeja : ICC ರ್ಯಾಂಕಿಂಗ್ ನಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಪಡೆದ ಜಡೇಜಾ….
ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಐಸಿಸಿ ಟೆಸ್ಟ್ ಬೌಲರ್ ರ್ಯಾಂಕಿಂಗ್ನ ಅಗ್ರ ಹತ್ತರೊಳಗೆ ಸ್ಥಾನ ಪಡೆದಿದ್ದಾರೆ.
ರವೀಂದ್ರ ಜಡೇಜಾ ಎರಡು ಟೆಸ್ಟ್ಗಳಿಂದ 17 ವಿಕೆಟ್ಗಳೊಂದಿಗೆ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಪ್ರಮುಖ ವಿಕೆಟ್ ಟೇಕರ್ ಆಗಿ ಹೊರ ಹೊಮ್ಮಿದ್ದಾರೆ ಮತ್ತು ಬೌಲರ್ ಶ್ರೇಯಾಂಕದಲ್ಲಿ ಒಂಬತ್ತನೇ ಸ್ಥಾನಕ್ಕೆ ಏರಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಟಾಪ್ 10 ರಲ್ಲಿ ಸ್ಥಾನ ಪಡೆದ ಮೂರನೇ ಬೌಲರ್ ಜಡೇಜಾ ಆಗಿದ್ದಾರೆ.
ಬಲಗೈ ಆಫ್ ಸ್ಪಿನ್ನರ್ ಅಶ್ವಿನ್ ಎರಡನೇ ಸ್ಥಾನಕ್ಕೆ ಏರಿದ್ದು, 40 ವರ್ಷದ ಜೇಮ್ಸ್ ಆಂಡರ್ಸನ್ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಭಾರತದ ಆಲ್ರೌಂಡರ್ ಅಕ್ಷರ್ ಪಟೇಲ್ – ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದು, ಇತ್ತೀಚಿನ ಟೆಸ್ಟ್ ಆಲ್ರೌಂಡರ್ ಶ್ರೇಯಾಂಕದಲ್ಲಿ ಒಟ್ಟಾರೆ ಎರಡು ಸ್ಥಾನ ಮೇಲೆರಿ ಐದನೆ ಸ್ಥಾನವನ್ನ ಗಳಿಸಿದ್ದಾರೆ.
Ravindra Jadeja: Jadeja ranked in the top ten in the ICC ranking…