ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14ರಂದು ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.
ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಶ್ರೀಮತಿ ಗೀತಾ, ಮಕ್ಕಳಾದ ಸವಿತಾ ಹಾಗೂ ಸೌಮ್ಯ ಅವರಿಗೆ ತಲಾ 5 ಲಕ್ಷ ರೂ.ಗಳು ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ಮಕ್ಕಳಾದ ರಶ್ಮಿ ಮತ್ತು ಇಂಚರಾ, ಕೆ.ಆರ್.ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತರ‍್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.








