ಬೆಂಗಳೂರು : ಮೊಗ್ಗಿನ ಮನಸ್ಸಿನ ಚಲುವೆ, ಚಂಡನ ಬೆಡಗಿ, ನಟಿ ಶುಭಾ ಪೂಂಜಾಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶುಭಾ ಪೂಂಜಾ ಅವರು ಮಂಗಳೂರು ಮೂಲದ ಸುಮಂತ್ ಎಂಬ ಹುಡುಗನನ್ನು ವರಿಸಲಿದ್ದಾರೆ. ಸುಮಂತ್ ಅವರು ಜಯಕರ್ನಾಟಕ ಬೆಂಗಳೂರು ಸೌತ್ ವಿಂಗ್ ಪ್ರೆಸಿಡೆಂಟ್ ಆಗಿದ್ದಾರೆ. ಅಲ್ಲದೇ ಸುಮಂತ್ ಮಹಾಬಲ ಬಿಸಿನೆಸ್ ಮ್ಯಾನ್ ಕೂಡ ಆಗಿದ್ದಾರೆ.
ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರು ಪರಸ್ಪರ ಒಂದು ವರ್ಷದಿಂದ ಪ್ರೀತಿಸುತ್ತಿದ್ದು, ತಮ್ಮ ಪ್ರೀತಿಯ ಬಗ್ಗೆ ಕುಟುಂಬದವರ ಬಳಿ ಹೇಳಿಕೊಂಡಿದ್ದಾರೆ. ಈಗ ಇಬ್ಬರ ಕುಟುಂಬದವರು ಇವರ ಪ್ರೀತಿ ಒಪ್ಪಿದ್ದು, ಇದೇ ವರ್ಷ ಮದುವೆ ಮಾಡಲು ನಿಶ್ಚಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ನಟಿ ಶುಭಾ ಪೂಂಜಾ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ‘ಜಾಕ್ ಪಾಟ್’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಮೊಗ್ಗಿನ ಮನಸ್ಸು ಸಿನಿಮಾ ಇವರಿಗೆ ಹೆಸರು ತಂದುಕೊಡ್ತು. ಇದುವರೆಗೂ ಶುಭಾ ಪೂಂಜಾ ಕನ್ನಡದಲ್ಲಿ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.








