ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಸಲ್ಲಿಸುವ ಸಲುವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ರಾಜ್ಯದಲ್ಲಿ 7,770 ಶಾಲಾ ಕೊಠಡಿಗಳು ಬಿದ್ದು ಹೋಗಿವೆ. ಅವುಗಳ ರಿಪೇರಿಗೆ 1500 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಬೇಕಾಗಿದೆ ಎಂದ್ರು. ಇದಕ್ಕೆ ಉತ್ತರಿಸಿದ ಸಚಿವ ಸುರೇಶ್ ಕುಮಾರ್ ಅವರು, 7,770 ಕೊಠಡಿಗಳ ದುರಸ್ತಿಗೆ 199.50 ಕೋಟಿ ರೂ.ಗಳ ಬಿಡುಗಡೆ ಮಾಡಲಾಗಿದೆ. ಇನ್ನಷ್ಟು ಶಾಲೆಗಳ ಪುನರ್ ನಿರ್ಮಾಣಕ್ಕೆ 750 ಕೋಟಿ ನೀಡಲಾಗಿದೆ. ಈಗಾಗಲೇ ಶಾಲೆಗಳ ಪುನರ್ ನಿರ್ಮಾಣ ಕಾರ್ಯವು ಆರಂಭವಾಗಿದೆ ಎಂದರು.
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...








