ನವದೆಹಲಿ : ದಿನಕ್ಕೆ ಹದಿನೆಂಟು ಸಾವಿರ ಜನಕ್ಕೆ ರ್ಯಾಂಡಮ್ ಟೆಸ್ಟ್ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತು ಪ್ರಸ್ತುತ ಪರಿಸ್ಥಿತಿ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷ ಸಭೆ ನಡೆಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಸರ್ವಪಕ್ಷ ಸಭೆ ಕರೆದಿದ್ದರು. ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಸೋಂಕು ತಡೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಅಮಿತ್ ಶಾ ಪ್ರಮುಖ ರಾಜಕೀಯ ಪಕ್ಷಗಳ ನಾಯಕರನ್ನು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಬಿಎಸ್ ಪಿ ಪಾರ್ಟಿ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಭಾಗವಹಿಸಿದ ನಾಯಕರ ಅಭಿಪ್ರಾಯವನ್ನು ಅಮಿತ್ ಶಾ ಪಡೆದುಕೊಂಡಿದ್ದಾರೆ.
ಅಲ್ಲದೆ ದೆಹಲಿಯಲ್ಲಿ 41 ಸಾವಿರ ಜನಕ್ಕೆ ಕೊರೊನಾ ಸೋಂಕು ತಗುಲಿದೆ. 1300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇನ್ನೂ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚು ಹೊಂದಿದ ರಾಜ್ಯದಲ್ಲಿ ದೆಹಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಇಂದು ಸರ್ವ ಪಕ್ಷ ಸಭೆ ನಡೆಸಲಾಗಿದೆ.








