PM-KISAN : ಬೆಳಗಾವಿಯಲ್ಲಿ 13ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಲಿದ್ದಾರೆ ಮೋದಿ….
ಸಣ್ಣ ರೈತರ ಆರ್ಥಿಕ ಕೃಷಿಗಾರಿಕೆಗೆ ಹಣಕಾಸು ನೆರವು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯ (PM-KISAN)ನ್ನ ಜಾರಿಗೊಳಿಸಿದೆ. ಇದರ 12ನೇ ಕಂತು ಬಿಡುಗಡೆಯಾಗಿದ್ದು ರೈತರು 13ನೇ ಕಂತಿಗಾಗಿ ಎದುರುನೋಡುತ್ತಿದ್ದಾರೆ.
ಇದೇ ಫೆಬ್ರುವರಿ 27ರಂದು ಅಂದರೇ ನಾಳೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆಗಾಗಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಆನಂತ ಬೆಳಗಾವಿಗೆ ಪ್ರಯಾಣಿಸುತ್ತಿದ್ದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ದೇಶದ 8 ಸಾವಿರ ರೈತರಿಗೆ 16 ಸಾವಿರ ಕೋಟಿ ರೂ. ಬಿಡುಗಡೆಯಾಗಲಿದೆ.
ನರೇಂದ್ರ ಮೋದಿ ಅವರು ದೆಹಲಿಯಿಂದ ಬೆಳಗ್ಗೆ 11.15ಕ್ಕೆ ಶಿವಮೊಗ್ಗ ನೂತನ ಏರ್ಪೋರ್ಟ್ ಗೆ ಆಗಮಿಸಲಿದ್ದಾರೆ. ವಿಮಾನ ಇಳಿದ ಬಳಿಕ ನೂತನ ಏರ್ ಪೊರ್ಟ್ ಟರ್ಮಿನಲ್ ವೀಕ್ಷಿಸಲಿದ್ದಾರೆ. ನಂತರ ಏರ್ ಪೊರ್ಟ್ ಆವರಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಾವಿರಾರು ಕೋಟಿ ಕೇಂದ್ರ ಅನುದಾನದ ವಿವಿಧ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.
PM-KISAN : Modi will release the 13th installment of Kisan Samman yojana money in Belgaum….








