ಬಳ್ಳಾರಿ: ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ತಮ್ಮ ಪುತ್ರನ ಅದ್ಧೂರಿ ಮದುವೆ ಸಮಾರಂಭಲ್ಲಿ ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಹಾಡಲಾಗಿದೆ.
ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡದಲ್ಲಿ ನಡೆದ ಪಿಟಿಪಿ ಪುತ್ರನ ಮದುವೆ ಇದೀಗ ಟೀಕೆಗೂ ಗುರಿಯಾಗಿದೆ. ಮದುವೆ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಲಿ, ಮಾಜಿ ಸಚಿವರು ಶಾಸಕರು ಸೇರಿದಂತೆ ಹಲವು ಮುಖಂಡರು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ಮದುವೆಗೆ ಆಗಮಿಸಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಅಸಹಾಯಕರಾಗಿದ್ದರು. 
ಕೊರೊನಾ ಹಿನ್ನೆಲೆ ಲಾಕ್ಡೌನ್ ಸಡಿಲಿಸಿದರು ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ ಜನಸಾಮಾನ್ಯರಿಗೆ ಒಂದು ನ್ಯಾಯ, ಜನಪ್ರತಿನಿಧಿಗಳಿಗೆ ಒಂದು ನ್ಯಾಯ ಎನ್ನುವಂತಾಗಿದೆ. ಇತ್ತಿಚೆಗಷ್ಟೆ ಸ್ವತ: ಆರೋಗ್ಯ ಸಚಿವ ಶ್ರೀರಾಮುಲು ಅದ್ಧೂರಿ ಮೆರವಣಿಗೆ ಮೂಲಕ ಲಾಕ್ಡೌನ್ ನಿಯಮ ಉಲ್ಲಂಘಿಸಿ ಟೀಕೆಗೆ ಗುರಿಯಾಗಿದ್ದರು. ಇದರ ಬೆನ್ನಲ್ಲೆ ಇದೀಗ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯಕ ಈ ಸಾಲಿಗೆ ಸೇರಿದ್ದಾರೆ.
ಜನಸಾಮಾನ್ಯರು ಒಂದು ಸಣ್ಣ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುವ ಆಡಳಿತ ವ್ಯವಸ್ಥೆ, ಜನಪ್ರತಿನಿಧಿಗಳ ವಿಚಾರದಲ್ಲಿ ಅಸಹಾಯಕವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








