women’s day : ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ…
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕಿಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು “ಸಮಾಜದಲ್ಲಿ ಮಹಿಳೆಗೆ ವಿಶಿಷ್ಟ ಸ್ಥಾನವಿದೆ. ಮಹಿಳೆಯರು ಸಾಧಿಸದ ಕ್ಷೇತ್ರವಿಲ್ಲ. ಅವರ ಕರ್ತವ್ಯ ಪ್ರಜ್ಞೆ, ಸಹಿಷ್ಣತೆ ಅನುಕರಣೀಯ. ಅದರಲ್ಲೂ ಗ್ರಾಮೀಣ ಭಾಗದ ಮಹಿಳೆಯರ ಕಾರ್ಯಕ್ಷೇತ್ರ ವಿಸ್ತಾರವಾದ್ದದ್ದು, ಕುಟುಂಬದ ನಿರ್ವಹಣೆ ಜೊತೆಗೆ, ಸಮಾಜದ ಒಳಿತಿಗೂ ಶ್ರಮಿಸುವ ಅವರ ಅದರ್ಶನೀಯ ನಡೆ ಮಾದರಿಯಾದದ್ದು ಎಂದರು.
ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪೂರಕವಾಗಿ ಮಹಿಳೆಯರ ಕಲ್ಯಾಣಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಗ್ರಾಮೀಣ ಭಾಗದ ರೈತ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಸಹಾಯಧನ ನೀಡಲು ನಿರ್ಧರಿಸಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತರು, ಬಿಸಿಯೂಟ ಕಾರ್ಯಕರ್ತರಿಗೆ ಸೇವಾ ಭದ್ರತೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮಹಿಳೆಯರು ಅಭಿವೃದ್ಧಿ ಹೊಂದಿದಾಗ ಮಾತ್ರ, ರಾಜ್ಯದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ನಾರಿಯರ ಸ್ವಾವಲಂಬನೆಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
Women’s day: CM presents Kittoor Rani Chennamma award to achievers…