2nd PUC Exam 2023 : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ…
ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ-2023 ವಾರ್ಷಿಕ ಪರೀಕ್ಷೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಾಗಿ 1109 ಪರೀಕ್ಷಾ ಕ್ಷೆಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. 7,26,224 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಲಿದ್ದರೆ. ಇದರಲ್ಲಿ ಹೊಸದಾಗಿ 6,29,791 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 3,25,053 ವಿದ್ಯಾರ್ಥಿನಿಯರು, 3,47,038 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಲ್ಲದೆ, 25,847 ಖಾಸಗಿ ಮತ್ತು 70,586 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.
ನಾಳೆಯಿಂದ ಅಂದರೆ ಮಾರ್ಚ್ 9 ರಿಂದ ಮಾರ್ಚ್ 29 ರ ವರೆಗೂ ವಿವಿಧ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಜತೆಗೆ ಪೊಲೀಸ್ ಬಂದೋಬಸ್ತ್ಗೂ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಇಂದಿನಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಜ್ಜಾಗಿರುವ ನನ್ನೆಲ್ಲಾ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಭಯ, ಆತಂಕ ಬಿಟ್ಟು ಧೈರ್ಯದಿಂದ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಯಶಸ್ಸು ನಿಮ್ಮದಾಗಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದ್ದಾರೆ.
2nd PUC Exam 2023 : 2nd PUC Exam starts from today…