Bangladesh : ಕಾಲುವೆಗೆ ಉರುಳಿದ ಬಸ್ ; 17ಮಂದಿ ಸಾವು 30 ಮಂದಿಗೆ ಗಾಯ….
ವೇಗವಾಗಿ ಬಂದ ಬಸ್ ರಸ್ತೆ ಬದಿಯ ಕಾಲುವೆ ಬಿದ್ದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಭೀಕರ ಬಸ್ ಅಪಘಾತ ಬಾಂಗ್ಲಾದೇಶದಲ್ಲಿ ಸಂಭವಿಸಿದೆ. ಬಸ್ , ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಮದರಿಪುರ ಪ್ರದೇಶದ ಎಕ್ಸ್ಪ್ರೆಸ್ವೇಯಲ್ಲಿ ಚಲಿಸುತ್ತಿತ್ತು.
ಬೆಳಗ್ಗೆ 07.30ರ ಸುಮಾರಿಗೆ ಬಸ್ ನಿಯಂತ್ರಣ ತಪ್ಪಿ ಪಕ್ಕದ ಕಾಲುವೆಗೆ ಉರುಳಿದೆ. ಘಟನೆಯಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 17 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೃತ ದೇಹಗಳನ್ನ ಮತ್ತು ಗಾಯಾಳುಗಳನ್ನು ಬಸ್ನಿಂದ ಹೊರತೆಗೆಯಲಾಗಿದೆ. ಗಾಯಳುಗಳ ಸ್ಥಿತಿಯನ್ನ ಆಧರಿಸಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದ ಅಥವಾ ಬಸ್ಸಿನ ದೋಷದಿಂದ ಅಪಘಾತ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಬಸ್ ಟಯರ್ ಸ್ಫೋಟಗೊಂಡಿದ್ದರಿಂದ ಈ ಘಟನೆ ನಡೆದಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ಘಟನೆಯ ಕುರಿತು ತನಿಖೆ ನಡೆಸಿ ಸತ್ಯಾಂಶ ಹೊರತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಹಾಗೂ ಗಾಯಗೊಂಡವರ ವಿವರಗಳನ್ನ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ಸರಿಯಾದ ರಸ್ತೆ ನಿರ್ವಹಣೆ ಇಲ್ಲದ ಕಾರಣ ರಸ್ತೆ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ.
Bangladesh: The bus fell into the canal; 17 people died and 30 people were injured.








