ಕೋಲಾರ : ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಾಗಿ ತುಂಬು ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಭಾರತೀ (26) ಮೃತ ಮಹಿಳೆ. ಈ ಮಹಿಳೆ ಬಂಗರಪೇಟೆಯ ವಿಜಯನಗರ ನಿವಾಸಿಯಾಗಿದ್ದಾರೆ. ಮೃತ ಮಹಿಳೆಯ ಸಂಬಂಧಿಕರು ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಠನೆ ನಡೆಸುತ್ತಿದ್ದಾರೆ.
ಮಂಜುನಾಥ್ ಎಂಬುವವರ ಪತ್ನಿಗೆ ಭಾರತಿಗೆ ಶನಿವಾರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡದೆ ಕೊನೆಯ ಹಂತದಲ್ಲಿ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಹೀಗಾಗಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಮಹಿಳೆ ಸಾವನ್ನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಮಗು ಕಾಪಾಡಿದ್ದಾರೆ. ಆದರೆ, ಮಹಿಳೆ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಬಂಗಾರಪೇಟೆ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.








