ಬೆಂಗಳೂರು : ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇದರ ಮಧ್ಯೆ ಬಂಡಾಯದ ಬಿರುಗಾಳಿ ಬೀಸುತ್ತಿದೆ.
ನಮ್ಮ ನಾಯಕರಿಗೆ ಟಿಕೆಟ್ ನೀಡಿ ಎಂದು ಕಾರ್ಯಕರ್ತರು ಕೆಪಿಸಿಸಿ ಕಚೇರಿ ಎದುರು ಆತ್ಮಹತ್ಯೆಯ ನಾಟಕ ಸೇರಿದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ತೊರೆದ ಎನ್.ವೈ. ಗೋಪಾಲಕೃಷ್ಣ ಅವರು ಇಂದು ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ಅವರಿಗೆ ಮೊಳಕಾಲ್ಮೂರು ಟಿಕೆಟ್ ಸಿಗುವ ಸಾಧ್ಯತೆ ಇದೆ. ಹೀಗಾಗಿ ಟಿಕೆಟ್ ಕೈ ತಪ್ಪುವ ಭೀತಿಯಲ್ಲಿರುವ ಯೋಗೇಶ್ ಬಾಬು ಬೆಂಬಲಿಗರು ಕೆಪಿಸಿಸಿ ಕಚೇರಿ ಹೊರಗೆ ಹೈಡ್ರಾಮಾ ಸೃಷ್ಟಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಗೋಪಾಲಕೃಷ್ಣ ಬೆಂಬಲಿಗರು ಕೂಡ ತಮ್ಮ ನಾಯಕನ ಪರ ಘೋಷಣೆ ಕೂಗಿದ್ದಾರೆ. ಒಂದು ಹಂತದಲ್ಲಿ ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಮುತ್ತಿಗೆ ಹಾಕಲು ಯೋಗೇಶ್‍ಬಾಬು ಬೆಂಬಲಿಗರು ಮುಂದಾಗಿದ್ದಾರೆ.
ಅಲ್ಲದೇ, ತರಿಕೆರೆ ಟಿಕೆಟ್ ಆಕಾಂಕ್ಷಿ ಗೋಪಿಕೃಷ್ಣ ಬೆಂಬಲಿಗರು ಅರೆ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದರು. ಅಲ್ಲದೇ, ಕೆಲವರು ವಿಷ ಕುಡಿಯಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದಾರೆ.








