ಬಂಜಾರ ಸಮುದಾಯದ ಒಳ ಮೀಸಲಾತಿಯ ಗೊಂದಲದ ಹಿನ್ನೆಲೆಯಲ್ಲಿ ಕೊಪ್ಪಳ ಜಲ್ಲೆಯ ಕುಷ್ಟಗಿ ತಾಲೂಕಿನ ವೆಂಕಟಾಪುರ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಅಧಿಕಾರಿ ಚಿದಾನಂದ ಕುರಿ ಸೇರಿದಂತೆ ಅಧಿಕಾರಿಗಳ ತಂಡ ಆಗಮಿಸಿತ್ತು. ಈ ಹಿನ್ನೆಲೆಯಲ್ಲಿ ಜನರ ಮನವೊಲಿಕೆ ಮಾಡಲು ಯತ್ನಿಸಿದರು. ಇಂದು ಬಂಜಾರ ಸಮುದಾಯದ ಮುಖಂಡರ ಸಭೆ ಇದ್ದು, ಸಭೆಯಲ್ಲಿ ನಿರ್ಧಾರ ಕೈಗೊಂಡ ರೀತಿಯಲ್ಲಿ ಮುಂದುವರೆಯುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.








