ಅಮೆರಿಕದಿಂದ ಬಂತು 100 ವೆಂಟಿಲೇಟರ್
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ಗಳ ಕೊರತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದಿಂದ ವೆಂಟಿಲೇಟರ್ಗಳಿಗೆ ಭಾರತ ಬೇಡಿಕೆ ಸಲ್ಲಿಸಿತ್ತು.ಭಾರತದ ಬೇಡಿಕೆಗೆ ಸ್ಪಂದಿಸಿದ ಅಮೆರಿಕದ 100 ವೆಂಟಿಲೇಟರ್ಗಳನ್ನು ಭಾರತಕ್ಕೆ ಕಳಿಸಿದೆ. ಅಧಿಕೃತವಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿದೆ.
ಭಾರತದಲ್ಲಿರುವ ಅಮೆರಿಕದ ರಾಯಭಾರಿ ಕೆನ್ ಜಸ್ಟರ್, 100 ವೆಂಟಿಲೇಟರ್ಗಳನ್ನು ದೆಹಲಿಯ ರೆಡ್ಕ್ರಾಸ್ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಅಮೆರಿಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಲೇರಿಯಾ ಚಿಕಿತ್ಸೆ ಬಳಸುವ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದರು. ಟ್ರಂಪ್ ಮನವಿ ಮೇರೆಗೆ ಭಾರತದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.








