ವಿದ್ಯುತ್ ತಂತಿ ತುಳಿದು ಕಾಡಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಾಪಟ್ಟಣ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೆಂಚಪ್ಪ ಎಬುವವರ ಹೊಲದಲ್ಲಿ ಬೆಳೆ ರಕ್ಷಣೆಗೆ ಅಳವಡಿಸಲಾಗಿದ್ದ ವಿದ್ಯುತ್ ಬೇಲಿಯಿಂದಾಗಿ ಆನೆ ಸಾವನ್ನಪ್ಪಿದೆ. ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು ತಿನ್ನಲು ಬಂದು ಐದು ವರ್ಷದ ಕಾಡಾನೆ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








