ಬೆಂಗಳೂರು : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಡಿಕೆಶಿ(DK Shivakumar) ವಿರುದ್ಧ ಬಿಜೆಪಿ ದೂರು ನೀಡಿದೆ.
ಡಿಕೆಶಿ ತಮ್ಮ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಪೆನ್ ಹಿಡಿದು ದೇಶದ ಭವಿಷ್ಯ ಉಜ್ವಲಗೊಳಿಸಬೇಕಾದ ಯುವಕರಿಗೆ ಆಯುಧಗಳನ್ನು ನೀಡಿ ಅವರ ಭವಿಷ್ಯವನ್ನು ಬಿಜೆಪಿ ಹೇಗೆ ಹಾಳುಗೆಡವಿದೆ ಎನ್ನುವುದಕ್ಕೆ ನಿನ್ನೆ ಸಾತನೂರಿನ ಬಳಿ ನಡೆದ ಘಟನೆಯೇ ಸಾಕ್ಷಿ ಎಂದು ಬಿಜೆಪಿ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯ ವಕೀಲ ಪ್ರಕೋಷ್ಟದ ಸಂಚಾಲಕ ಯೋಗೇಂದ್ರ ಹೊಡಗಟ್ಟ ದೂರು ನೀಡಿದ್ದಾರೆ.
ಒಂದು ಜನಾಂಗದ ಮತದಾರರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಆರೋಪಿಸಿದ್ದಾರೆ.








