ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಿಚ್ಚ (Kiccha) ಸುದೀಪ್ (Sudeep) ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿ(BJP)ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಪಕ್ಷ ಸರ್ವ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.
ಈ ಕುರಿತು ಅಧಿಕೃತವಾಗಿ ಸುದೀಪ್ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಬಿಜೆಪಿ ಮೂಲಗಳ ಪ್ರಕಾರ ಕಿಚ್ಚ ಬಿಜೆಪಿ ಸೇರುವುದು ನಿಶ್ಚಿತ ಎನ್ನಲಾಗುತ್ತಿದೆ. ಸ್ಟಾರ್ ಪ್ರಚಾರಕರಾಗಿ ಬರಲಿದ್ದಾರಾ ಅಥವಾ ಅಧಿಕೃತವಾಗಿ ಪಕ್ಷವನ್ನು ಸೇರುತ್ತಿದ್ದಾರೆ ಎನ್ನುವ ಗೊಂದಲವಿದೆ. ಈ ಗೊಂದಲಕ್ಕೆ ಮಧ್ಯಾಹ್ನ ತೆರೆಬೀಳಲಿದೆ.
ಈ ಹಿಂದೆ ರಮ್ಯಾ ಮೂಲಕ ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ಕೂಡ ನಡೆದಿತ್ತು. ಸುದೀಪ್ ಮನೆಗೆ ಸ್ವತಃ ಡಿ.ಕೆ. ಶಿವಕುಮಾರ್ (D.K. Shivakumar) ಭೇಟಿ ನೀಡಿ ಚರ್ಚೆ ನಡೆಸಿದ್ದರು. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಅವರನ್ನು ಸಂಪರ್ಕಿಸಿದ್ದರು. ಆ ಸಂದರ್ಭಗಳಲ್ಲಿ ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದು ಕಿಚ್ಚ ಹೇಳಿದ್ದರು. ಸದ್ಯ ಅವರ ನಿರ್ಧಾರ ಏನು ಎಂಬುವುದು ತಿಳಿಯಲಿದೆ.








