ವಿಜಯನಗರ ಜಿಲ್ಲೆಯಲ್ಲಿ ಮೊದಲ ವರ್ಷ ಧಾರೆ ಆರ್ಭಟಿಸಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.
ಹಗರಿಬೊಮ್ಮನಹಳ್ಳಿ, ಹೊಸಪೇಟೆ ತಾಲೂಕಿನಲ್ಲಿ ಮಳೆಯ ಸಿಂಚನವಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ, ಹಂಪಾಪಟ್ಟಣ ಸುತ್ತಮುತ್ತ ಮಳೆಯಾಗಿದೆ. ಹೀಗಾಗಿ ಬಿಸಿಲಿನಿಂದ ಬಸವಳಿದಿದ್ದ ಧರೆಗೆ ತಂಪೆರೆದಂತಾಗಿದೆ. ಹೊಸಪೇಟೆಯಲ್ಲ ಮೋಡ ಕವಿದ ವಾತಾವರಣವಿದ್ದು, ಜಿಟಿ ಜಿಟಿ ಮಳೆಯಾಗಿದೆ.








