ನವದೆಹಲಿ : ನಂದಿನಿ (Nandini) ನಂಬರ್ ಒನ್ ಬ್ರ‍್ಯಾಂಡ್ ಆಗಲಿದ್ದು, ಅಮುಲ್ (Amul) ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡಾ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನಂದಿನ ಬಂದ್ ಮಾಡಿ ಗುಜರಾತ್ ಗುಲಾಮರನ್ನಾಗಿ ಮಾಡುವುದಕ್ಕಾಗಿ ಅಮುಲ್ ಹೇರಲಾಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.








