ಗುರುಮಿಠಕಲ್ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಲಲಿತಾ ಅನಪುರ ಅವರಿಗೆ ಟಿಕೆಟ್ ನೀಡಿದೆ. ಇದರ ಬೆನ್ನಲ್ಲಿಯೇ ಕ್ಷೇತ್ರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
ಕ್ಷೇತ್ರದ ಟಿಕೆಟ್ ಗಾಗಿ ಭಾರೀ ಪೈಪೋಟಿ ನಡೆಸಿದ್ದ ನಾಗರತ್ನ ಕುಪ್ಪಿ ಅವರು ಅಸಮಾಧಾನಗೊಂಡಿದ್ದಾರೆ. ನಾಗರತ್ನಾ ಅವರು ಕೂಡ ಕ್ಷೇತ್ರದಲ್ಲಿ ಬಿಜೆಪಿಗಾಗಿ ದುಡಿದಿದ್ದರು. ಹೀಗಾಗಿ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೂ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದಾರೆ.








