ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ವಿಧಾನಸಭಾ ಚುನಾವಣೆಗೆ (Assembly Election) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿಯಲ್ಲಿ (Shiggaavi) ಸಿಎಂ ಸ್ಪರ್ಧೆ ಮಾಡುತ್ತಿದ್ದು, ಈ ಹಿನ್ನೆಲೆ ಸಿಎಂ ಶನಿವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಬೊಮ್ಮಾಯಿ ತಮ್ಮ ನಾಮಪತ್ರ ಸಲ್ಲಿಸಲು ಶಿಗ್ಗಾಂವಿ ಪ್ರಯಾಣದಲ್ಲಿದ್ದಾರೆ. ಬೆಂಗಳೂರಿನ ಆರ್.ಟಿ. ನಗರ ನಿವಾಸದಿಂದ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.
ವಿಶೇಷ ವಿಮಾನದ ಮೂಲಕ ಸಿಎಂ ಹುಬ್ಬಳ್ಳಿಗೆ ತೆರಳಲಿದ್ದು, ನಂತರ ಅಲ್ಲಿಂದ ಶಿಗ್ಗಾಂವಿಗೆ ರಸ್ತೆ ಮಾರ್ಗದ ಮೂಲಕ ತೆರಳಲಿದ್ದಾರೆ. 11 ಗಂಟೆ ವೇಳೆಗೆ ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆಯ ಬಳಿಕ ಬೊಮ್ಮಾಯಿ ಶಿಗ್ಗಾಂವಿಯ ತಮ್ಮ ನಿವಾಸದಲ್ಲಿ ಸಂಜೆ ವರೆಗೂ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ.








