ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ ಹೊಸ ಅಭಿಯಾನವೊಂದನ್ನು ಆರಂಭಿಸಿದ್ದಾರೆ. ಫೆಬ್ರವರಿ 24 ರಿಂದ ಮಾರ್ಚ್ 8 ರವರೆಗೆ ಪ್ರತಿದಿನ ಸಂಜೆ 7 ರಿಂದ ರಾತ್ರಿ 10 ರ ತನಕ ಈ ಅಭಿಯಾನ ನಡೆಯಲಿದೆ. ಈ ಅಭಿಯಾನದ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂಥ್ ಅವರು ಟಿಕ್ ಟಾಕ್ ನಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ.
#BeTogetherBengaluru ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಕಳುಹಿಸಲು ಇಶಾ ಪಂಥ್ ಅವರು ಸಾರ್ವಜನಿಕರಿಗೆ ವಿನಂತಿಸಿದ್ದಾರೆ.
Women from all walks of life are invited to join the campaign to assert women’s equal right to public spaces.
Pls share widely..#BeTogetherBengaluruಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸಮಾನ ಹಕ್ಕನ್ನು ಪ್ರತಿಪಾದಿಸುವ ಅಭಿಯಾನಕ್ಕೆ ಸೇರಲು ಎಲ್ಲಾ ವರ್ಗದ ಮಹಿಳೆಯರನ್ನು ಆಹ್ವಾನಿಸುತ್ತಿದ್ದೇವೆ..@DCPSEBCP pic.twitter.com/Sss8bVyVG2
— BengaluruCityPolice (@BlrCityPolice) February 21, 2020








