ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ. 29ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಸಂಜೆ 4ಕ್ಕೆ ಪೇಟೆಯಲ್ಲಿ ರೋಡ್ ಶೋ ನಡೆಸಿ ಸಿದ್ದಾಪುರ ಸರ್ಕಲ್‌ನಲ್ಲಿ ತೆರೆದ ವಾಹನದಲ್ಲಿ ಜನರನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಭಾಗವಹಿಸಲಿದ್ದಾರೆ. ಈ ರೋಡ್ ಶೋಗೆ ಸುಮಾರು 10 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ.
ಹೀಗಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಮತ್ತು ಡಿವೈಎಸ್‌ಪಿ ಬೆಳ್ಳಿಯಪ್ಪ ಅವರು ಭೇಟಿ ನೀಡಿ, ಭದ್ರತೆಯ ಪೂರ್ವ ತಯಾರಿಯ ಬಗ್ಗೆ ಪರಿಶಿಲಿಸಿದರು.
ಸರಕಾರಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಸಚಿವರಿಗೆ ಜಡ್ ಪ್ಲಸ್ ಭದ್ರತೆ ಇರುವುದರಿಂದ 6 ಮಂದಿ ಇನ್‌ಸ್ಪೆಕ್ಟರ್‌ಗಳು, 20 ಮಂದಿ ಪಿಎಸ್‌ಐಗಳು, 160 ಮಂದಿ ಪೊಲೀಸ್ ಸಿಬಂದಿ, ಹಾಗೂ 100ಕ್ಕೂ ಹೆಚ್ಚು ಡಿಆರ್ ಪೊಲೀಸರನ್ನು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.








