ಬೆಂಗಳೂರು: ರಾಜ್ಯದ ಹಲವು ಪ್ರದೇಶಗಳಲ್ಲಿ ಇನ್ನೂ ಮೂರು ದಿನ ಮಳೆಯ ಅಬ್ಬರ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ (Bengaluru) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಅಲ್ಲದೇ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಯಚೂರು, ದಾವಣಗೆರೆ, ಚಾಮರಾಜನಗರ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








