ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರ ಪರಿಣಾಮ ಮೇ 8ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ತೊಂದರೆಯಾಗುವ ಆತಂಕ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 6ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಹಲವು ಬದಲಾವಣೆಗಳಾಗಲಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ಚಂಡಮಾರುತ ಅಪ್ಪಳಿಸಿ, ರಾಜ್ಯದಲ್ಲಿ ಮಳೆ ಹೆಚ್ಚಾದರೆ, ಚುನಾವಣೆ ಪ್ರಚಾರ, ಮತದಾನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.








