ಮಂಡ್ಯ : ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಸಚಿವ ಕೆ.ಸಿ. ನಾರಾಯಣಗೌಡ (KC Narayana Gowda) ಅವರ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಸಚಿವ ನಾರಾಯಣಗೌಡ ಅವರು ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ್ದಾಗ 70ಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತ ಏಕಾಏಕಿ ಕಾರು ತಡೆದಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಸಚಿವರನ್ನು ನಿಂದಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಈ ವೇಳೆ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಕಾರು ಅಡ್ಡಗಟ್ಟಿದ ಜೆಡಿಎಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದನಿಸಿದ್ದಾರೆ.
ನಬಂದಂತೆ ನಿಂದಿಸಿ ತಳ್ಳಾಟ ನೂಕಾಟ ಮಾಡಿದ್ದಾರೆ. ತಕ್ಷಣ ಅಂಗರಕ್ಷಕರು ಸಚಿವ ಡಾ. ನಾರಾಯಣಗೌಡ ಅವರನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣಗೌಡ, ರಾಜ್ಯ ವಿಧಾನಸಭೆಗೆ ಇದು ನನ್ನ ಕೊನೆಯ ಚುನಾವಣೆ. ಕ್ಷೇತ್ರದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿರುವ ಯುವಕರನ್ನು ಗುರುತಿಸಿ ಅವರಿಗೆ ಅಧಿಕಾರ ಕೊಡುತ್ತೇನೆ ಎದು ಹೇಳಿದ್ದಾರೆ.








