ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಜೆಡಿಎಸ್‌ಗೆ (JDS) ಮತ ಹಾಕಿದರೆ ಕಾಂಗ್ರೆಸ್‌ಗೆ (Congress) ಮತ ಹಾಕಿದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಇದಕ್ಕೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (HD Deve Gowda) ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಹಾಸನ (Hassan) ಜಿಲ್ಲೆ, ಅರಸೀಕೆರೆ ತಾಲೂಕಿನ ಲಾಳನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಆರೋಪ- ಪ್ರತ್ಯಾರೋಪಗಳು ಸಹಜ. ಆದರೆ, ತೀರಾ ಹಗುರ ಮಾತುಗಳು ಸಲ್ಲ. ಅದು ಪ್ರಧಾನಿಗೆ ಶೋಭೆ ತರುವುದಿಲ್ಲ. ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ (Rahul Gandhi) ಮಾಡಿದ್ದನ್ನು, ಈ ಬಾರಿ ಮೋದಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿಗೂ ಪ್ರಧಾನಿ ಮೋದಿಗೂ ವ್ಯತ್ಯಾಸ ಇದೆ. ಆದರೆ, ರಾಹುಲ್ ಮಟ್ಟಕ್ಕೆ ಗಾಂಧಿ ಇಳಿಯಬಾರದಿತ್ತು. ರಾಹುಲ್ ಗಾಂಧಿ ಈಸ್ ಎ ಯಂಗ್‌ಸ್ಟರ್, ಮೋದಿ ಈಸ್ ಎ ಮೆಚ್ಯೂರ್ಡ್ ಲೀಡರ್’. ಆಡಿದ ಮಾತು ಹಿಂದಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.








