ರಾಜ್ಯದ ಹಲವೆಡೆ ಈಗಾಗಲೇ ಮಳೆರಾಯ ತನ್ನ ಅಬ್ಬರ ಆರಂಭಿಸಿದ್ದಾನೆ. ಈಗ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 6ರ ಸಮಯದಲ್ಲಿ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿ ಮ 7ರ ವರೆಗೆ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.








