ಮೈಸೂರು : ಇತ್ತೀಚೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಲಿಂಗಾಯತ ವಿಚಾರದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (B L Santhosh) ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ ವೈರಲ್ ಮಾಡಿದ್ದ ವ್ಯಕ್ತಿಯನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ದಿಲೀಪ್ ಗೌಡ (Dilip Gowda) ಬಂಧಿತ ವ್ಯಕ್ತಿಯಾಗಿದ್ದಾರೆ. ಲಿಂಗಾಯತ ಸಮುದಾಯದ ವಿರುದ್ಧ ಸಂತೋಷ್ ಹೇಳಿಕೆ ನೀಡಿದ ರೀತಿ ಪತ್ರಿಕಾ ವರದಿ ಸೃಷ್ಟಿ ಮಾಡಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಿತ್ತು ಬಿಜೆಪಿ (BJP) ನೀಡಿದ ದೂರಿನ ಆಧರಿಸಿ ಮೈಸೂರು ನಗರ ಪೊಲೀಸರು ಈ ವ್ಯಕ್ತಿಯನ್ನು ಬಂಧಿಸಿದ್ದಾರೆ.








