ಬೆಂಗಳೂರು : ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸಾಕಷ್ಟು ಕುತೂಹಲ ಕೆರಳಿಸಿದ ಅಭ್ಯರ್ಥಿಗಳ ಆಯ್ಕೆಗೆ ಬ್ರೇಕ್ ಬಿದಿದ್ದೆ. ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳಾಗಿ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಹೆಸರುಗಳನ್ನು ಘೋಷಣೆ ಮಾಡಿದೆ. ಆದರೆ ಬಿ.ಕೆ. ಹರಿಪ್ರಸಾದ್ ಹೆಸರು ಘೋಷಣೆ ಆಗಿದ್ದು ಕೈ ನಾಯಕರಲ್ಲಿ ಅಚ್ಚರಿ ಮೂಡಿಸಿದೆ. ಜೊತೆಗೆ ನಸೀರ್ ಅಹ್ಮದ್ ಗೆ ಟಿಕೆಟ್ ಸಿಗುವುದು ನಿರೀಕ್ಷಿತವಾಗಿತ್ತು.
ಬಿ.ಕೆ. ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿದೆ, ನಸೀರ್ ಅಹ್ಮದ್ ಆಯ್ಕೆಯಾಗುವಲ್ಲಿ ರಾಜ್ಯ ನಾಯಕರ ಪಾತ್ರವಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಬಿ.ಕೆ ಹರಿಪ್ರಸಾದ್ ರಾಜ್ಯಸಭೆ ಟಿಕೆಟ್ ಪಡೆಯಲು ಪ್ರಯತ್ನ ಪಟ್ಟಿದ್ದರು. ಆದರೆ ಒಂದೇ ಸ್ಥಾನ ಖಾಲಿರುವ ಕಾರಣಕ್ಕೆ ಹರಿಪ್ರಸಾದ್ ಗೆ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ ವಿಧಾನ ಪರಿಷತ್ ಟಿಕೆಟ್ ನೀಡಿ ಬಿ.ಕೆ. ಹರಿಪ್ರಸಾದ್ ಗೆ ಮಣೆ ಹಾಕಲಾಗಿದೆ.
ಟಿಕೆಟ್ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಎರಡು ಸೂತ್ರಗಳನ್ನು ಅನುಸರಿಸಿದೆ. ಒಂದು ರಾಜ್ಯ ನಾಯಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿದ್ದು. ಎರಡನೇಯದ್ದು ರಾಷ್ಟ್ರೀಯ ನಾಯಕರ ಅಭಿಪ್ರಾಯದಂತೆ ಬಿ.ಕೆ.ಹರಿಪ್ರಸಾದ್ ಟಿಕೆಟ್ ನೀಡಲಾಗಿದೆ. ‘
ಜೂನ್ 18 ರಂದು ನಾಮಪತ್ರ ಸಲ್ಲಿಸಲು ಕೊನೆದಿನವಾಗಿದ್ದು , ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ಈವರೆಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಹಾಗಾಗಿ ಈ ಎರಡು ಪಕ್ಷಗಳು ಸದ್ಯದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.








